Sunday, September 8, 2024

ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಗೆಲುವು

ಕುಂದಾಪುರ: ಕರ್ನಾಟಕ ವಿಧಾನ ಪರಿಷತ್‍ಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ವಿಧಾನ ಪರಿಷತ್ ಪ್ರವೇಶ ಮಾಡಿದ್ದಾರೆ.

ಮಂಜುನಾಥ ಭಂಡಾರಿ 2079 ಮತಗಳನ್ನು ಪಡೆದು ಗೆಲುವು ಪಡೆದಿದ್ದಾರೆ. ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರು 3,672 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಎಸ್.ಡಿ.ಪಿ.ಐ 204 ಮತಗಳನ್ನು ಪಡೆದಿದೆ. ಒಟ್ಟು 6011 ಮತ ಚಲಾವಣೆಯಾಗಿದ್ದು, 56 ಮತಗಳು ಅಸಿಂಧುವಾಗಿವೆ.

ಬಂಟ್ವಾಳ ತಾಲೂಕಿನ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಮಂಜುನಾಥ ಭಂಡಾರಿ ಪಂಚಾಯತ್ ರಾಜ್‍ನಲ್ಲಿ ಎಂಪಿಲ್ ಮತ್ತು ಪಿಎಚ್‍ಡಿ ಮಾಡಿದ ವಿರಳ ರಾಜಕಾರಣಿ. ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಮತ್ತು ಬೆಂಜದಪದವಿನ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ಚಿಕ್ಕಮಗಳೂರು ಮತ್ತು ಶಿವಮೊಗ್ಗ ಇಂಜನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ ಪಡೆದರು. ರಾಜಕೀಯ ಶಾಸ್ತ್ರದಲ್ಲಿ ಎಂ.ಎ ಪದವಿ ಪಡೆದ್ದಾರೆ. ಅಮೇರಿಕಾದ ಐಸನ್ ಹೂವರ್ ಫೆಲೋಶಿಪ್ ಪಡೆದವರು. ಮಂಗಳೂರಿನ ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾಗಿರುವ ಇವರು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!