spot_img
Friday, March 27, 2026
spot_img

ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ಪ್ರಶಸ್ತಿ

ಕುಂದಾಪುರ: ಡಿ.14ರಂದು ನಡೆದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಅವಿಭಜಿತ ದ.ಕ ಜಿಲ್ಲೆಯಲ್ಲಿ ಕುಂದಾಪುರದ ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 2020-21ನೇ ಸಾಲಿನಲ್ಲಿ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ 2021-22 ನೀಡಿ ಗೌರವಿಸಲಾಯಿತು.

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಜೋನ್ಸನ್ ಡಿ ಅಲ್ಮೇಡಾ ಹಾಗೂ ಸಂಘದ ಉಪಾಧ್ಯಕ್ಷರಾದ ಕಿರಣ್ ಲೋಬೊ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೇಬಲ್ ಡಿ ಅಲ್ಮೇಡಾ ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ, ಉಡುಪಿ ಹಾಗೂ ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ಬಿ.ನಾಯಕ್ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!