spot_img
Friday, March 27, 2026
spot_img

ಜ.7ಕ್ಕೆ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮರವಂತೆ ಶಾಖೆಯ ನೂತನ ಕಟ್ಟಡದ ಉದ್ಘಾಟನೆ

ಬೈಂದೂರು, ಡಿ.31: ಪ್ರಗತಿ ಪಥದಲ್ಲಿ ಸಾಗುತ್ತಿರುವ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮರವಂತೆ ಪರಿಸರದ ಸದಸ್ಯರು, ಗ್ರಾಹಕರ ಬಹುಬೇಡಿಕೆಯಂತೆ ಮರವಂತೆ ಶಾಖೆಯ ನೂತನ ಕಟ್ಟಡ ನಿರ್ಮಾಣವಾಗಿದ್ದು ಜನವರಿ 7 ಶುಕ್ರವಾರ ಪೂರ್ವಾಹ್ನ 10-30ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್.ರಾಜು ಪೂಜಾರಿ ಹೇಳಿದರು.

ಅವರು ರಂದು ನಾವುಂದದಲ್ಲಿ ಸಂಘದ ಪ್ರಧಾನ ಕಛೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.

ನೂತನ ಕಟ್ಟಡವನ್ನು ದ.ಕ ಜಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಕ್ಷೇತ್ರದ ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕರು, ಸಾಗರ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಬೈಂದೂರು ಅಧ್ಯಕ್ಷರಾದ ಕೆ.ಗೋಪಾಲ ಪೂಜಾರಿ ಗೋದಾಮು ಉದ್ಘಾಟಿಸಲಿದ್ದಾರೆ. ನಿವೃತ್ತ ಉಪನ್ಯಾಸಕ ಎಸ್.ಜನಾರ್ದನ ಮರವಂತೆ ಶುಭಾಶಂಸನೆಗೈಯ್ಯಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮರವಂತೆ ಗ್ರಾ.ಪಂ ಅಧ್ಯಕ್ಷೆ ರುಕ್ಮಿಣಿ, ಉಡುಪಿ ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ಬಿ ನಾಯಕ್, ಕುಂದಾಪುರ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ., ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಮಹೇಶ ಹೆಗ್ಡೆ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಭಾಗವಹಿಸಲಿದ್ದಾರೆ ಎಂದರು.

ಅಪರಾಹ್ನ 1 ಗಂಟೆಗೆ ಅಂತರಾಷ್ಟ್ರೀಯ ಯೋಗಪಟು, ಚಲನಚಿತ್ರ ಬಾಲನಟಿ ಧನ್ವಿ ಮರವಂತೆ ಇವರಿಂದ ಯೋಗ ಮತ್ತು ನೃತ್ಯ ಪ್ರದರ್ಶನ, ಗಾಯಕ ಗಣೇಶ್ ಗಂಗೊಳ್ಳಿ ತಂಡದವರಿಂದ ಸುಗಮ ಸಂಗೀತ, ಅಪರಾಹ್ನ 2-30ಕ್ಕೆ ಯಕ್ಷರಾಘವ ಜನ್ಸಾಲೆ ಪ್ರತಿಷ್ಠಾನ ಸಿದ್ಧಾಪುರ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ‘ಕಂಸ ದಿಗ್ವಿಜಯ-ಕಂಸ ವಧೆ’ ಪ್ರದರ್ಶನಗೊಳ್ಳಲಿದೆ ಎಂದರು.

ಕೇವಲ ಸಂಘದ ಕಟ್ಟಡ ನಿಧಿಯನ್ನಷ್ಟೇ ಬಳಸಿಕೊಂಡು ಸುಮಾರು 50 ಲಕ್ಷ ರೂ.ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ಮರವಂತೆಯಲ್ಲಿ ನಿರ್ಮಾಣವಾಗಿದೆ. ರಾಷ್ಟ್ರೀಕೃತ ಬ್ಯಾಂಕಿನಂತೆ ಸೌಕರ್ಯವನ್ನು ಇಲ್ಲಿ ಒದಗಿಸಲಾಗುತ್ತಿದೆ. ಈಗಾಗಲೇ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿ ಸೇರಿದಂತೆ ಮೂರು ಶಾಖೆಗಳು ಸ್ವಂತ ನಿವೇಶನ, ಸ್ವಂತ ಕಟ್ಟಡ ಹೊಂದಿವೆ ಎಂದರು.

ಸುದ್ಧಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಎಂ.ಚಂದ್ರಶೀಲ ಶೆಟ್ಟಿ, ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು. ನಾಮ ನಿರ್ದೇಶಿತ ನಿರ್ದೇಶಕ ಎಂ.ವಿನಾಯಕ ರಾವ್ ಸ್ವಾಗತಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!