spot_img
Friday, March 27, 2026
spot_img

ಕಾರಂತ ಥೀಮ್ ಪಾರ್ಕ್‌ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಕೋಟ : ಜ್ಞಾನಪೀಠ ಪುರಸ್ಕೃತ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರು ಭೇಟಿ ನೀಡಿದರು. ಕೆರೆಯ ಮಧ್ಯದಲ್ಲಿರುವ ಕಾರಂತರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಂಗ ಮಂದಿರ, ಗ್ರಂಥಾಲಯ, ಆರ್ಟ್ ಗ್ಯಾಲರಿ, ಅಂಗನವಾಡಿ ವೀಕ್ಷಿಸಿದರು. ನಂತರ ಮಾತನಾಡಿ ಕಾರಂತರು ಸಾಹಿತ್ಯ ಲೋಕದ ಕಣ್ಮಣಿ, ನಮಗಾಗಿ ನಮ್ಮ ಮುಂದಿನ ಪೀಳಿಗೆಗೆ ಅವರು ಆದರ್ಶನೀಯರು, ಅವರ ನೆನಪು ಚಿರಸ್ಥಾಯಿಯಾಗಿರಲು ಕಾರಂತ ಥೀಮ್ ಪಾರ್ಕ್ ಸಹಕಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ ಮೂರ್ತಿ, ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಪಂಚಾಯತ್ ಉಪಾಧ್ಯಕ್ಷ ವಾಸು ಪೂಜಾರಿ, ಪ್ರತಿಷ್ಠಾನ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!