spot_img
Friday, March 27, 2026
spot_img

ಅಂಪಾರು ಸಂಜಯಗಾಂಧಿ ಪ್ರೌಢ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ

ಕುಂದಾಪುರ: 1985ರ ನಂತರ ಭಾರತದಲ್ಲಿ ಸ್ವಾಮಿ ವಿವೇಕಾನಂದರ ಹುಟ್ಟು ಹಬ್ಬವನ್ನು “ರಾಷ್ಟ್ರೀಯ ಯುವ ದಿನ” ಎಂದು ಆಚರಿಸಲಾಗುತ್ತದೆ. ದೇಶದ ಸಂಪತ್ತು ಎಂದರೆ ಯುವ ಜನತೆ. ಯುವ ಸಮುದಾಯವನ್ನು ಸಂಪತ್ತಾಗಿ ಪರಿವರ್ತನೆ ಮಾಡುವ ಸವಾಲು ಎಲ್ಲರ ಮುಂದಿದೆ. ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳಿ,ತಮಗೆ ವಿದ್ಯೆ ಕಲಿಸಿದ ಗುರುಗಳಲ್ಲಿ ದೇವರನ್ನು ಕಾಣಬೇಕು ಎಂದು ಅಂಪಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಶೋಕ್ ನಾಯ್ಕ್ ಕಾಜರ್ತಿ ಹೇಳಿದರು.

ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಉದಯ್ ಕುಮಾರ್ ಬಿ ಅವರು ರಾಷ್ಟ್ರೀಯ ಯುವ ದಿನದ ಮಹತ್ವದ ಕುರಿತು ಮಾತನಾಡಿ, ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಯುವಜನರಲ್ಲಿ ಬಿತ್ತುವ ಮಹತ್ವವಾದ ರಾಷ್ಟ್ರೀಯ ಯುವ ದಿನ ಹೊಂದಿದೆ. ಆಧ್ಯಾತ್ಮಿಕತೆಯ ಅಡಿಪಾಯದ ಪ್ರತೀಕ. ಅವರ ತತ್ವ,ಆದರ್ಶಗಳನ್ನು ಮೈಗೂಡಿಸಿಕೊಳ್ಳಿ ಎಂದರು.

ಈ ಸಂದರ್ಭದಲ್ಲಿ ಅಂಪಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಭಾರತಿ ಶೇಟ್ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮವನ್ನು ಸಂಸ್ಥೆಯ ಗೌರವ ಶಿಕ್ಷಕಿ ಸವಿತಾ ನಿರೂಪಿಸಿದರು. ಸಂಸ್ಥೆಯ ಮುಖ್ಯ ಶಿಕ್ಷಕರಾದ ಉದಯ್ ಕುಮಾರ್ ಬಿ ಸ್ವಾಗತಿಸಿದರು. ಕಾವ್ಯ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!