spot_img
Monday, March 23, 2026
spot_img

ಕುಂದಾಪುರ ಆರ್.ಎನ್.ಶೆಟ್ಟಿ ಪ.ಪೂ. ಕಾಲೇಜಿನಲ್ಲಿ ‘ಗೋಲ್ ಸೆಟ್ಟಿಂಗ್’ ತರಬೇತಿ

ಕುಂದಾಪುರ: ಜೆ.ಸಿ.ಐ ಕುಂದಾಪುರ ಸಿಟಿ ಇದರ ಯುವ ಸಪ್ತಾಹದ ಎರಡನೇ ದಿನದಂದು ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯ ಅಂಗವಾಗಿ ಜೀವನದಲ್ಲಿ ‘ ಗೋಲ್ ಸೆಟ್ಟಿಂಗ್’ ವಿಷಯದ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರದ ನ್ಯಾಯವಾದಿ ಟಿ. ಬಿ. ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಉದ್ದೇಶಿತ ಗುರಿ ಸಾಧಿಸಲು ಅಗತ್ಯವಿರುವ ಸಮ-ಧೃಢ ಚಿತ್ತದ ಬಗ್ಗೆ ತಿಳಿಸಿದರು. ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ಅಭಿಲಾಷ್ ಸ್ವಾಮಿ ವಿವೇಕಾನಂದರ ತತ್ವಗಳನ್ನು ಅಳವಡಿಸಿಕೊಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ ಚಿತ್ರಪಟಕ್ಕೆ ಪುಷ್ಪಾಂಜಲಿ ಸಲ್ಲಿಸಲಾಯಿತು.

ಜೆ.ಸಿ.ಐ ಕುಂದಾಪುರ ಸಿಟಿಯ ಸ್ಥಾಪಕಾಧ್ಯಕ್ಷರೂ, ಯುವ ಸಪ್ತಾಹ ಕಾರ್ಯಕ್ರಮದ ಪ್ರಾಜೆಕ್ಟ್ ಡೈರೆಕ್ಟರ್ ಜೆ.ಸಿ. ಹುಸೇನ್ ಹೈಕಾಡಿಯವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಸ್ವಾಗತಿಸಿದರು. ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಸಂದೀಪ್ ಪೂಜಾರಿ ಅತಿಥಿಗಳನ್ನು ಪುಷ್ಪ ನೀಡಿ ಸ್ವಾಗತಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!