spot_img
Monday, March 23, 2026
spot_img

ರಸ್ತೆ ಅಪಘಾತದಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ನಿಧನ

ಉಡುಪಿ: ಗುರುವಾರ ನಸುಕಿನ ವೇಳೆ ಮೂಡುಬಿದಿರೆಯ ಗಂಟಾಲಕಟ್ಟೆ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಿರಿಯಡ್ಕ ಮೇಳದ ಕಲಾವಿದ ವೇಣೂರು ವಾಮನ ಕುಮಾರ್ (47ವ) ಅವರು ಅಸುನೀಗಿದ್ದಾರೆ.

ಬುಧವಾರದ ಆಟ ಮುಗಿಸಿ ಬೆಳಗಿನ ಜಾವ ಬೈಕಿನಲ್ಲಿ ಬರುತ್ತಿದ್ದ ಅವರಿಗೆ ಮಾರುತಿ ಓಮ್ನಿಯೊಂದು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.

ಸುಮಾರು 30 ವರ್ಷಗಳಿಂದ ಯಕ್ಷಗಾನ ರಂಗದಲ್ಲಿ ಕಲಾವಿದರಾಗಿದ್ದು, ಇತ್ತೀಚೆಗೆ ಹಿರಿಯಡ್ಕ ಮೇಳದ ವ್ಯವಸ್ಥಾಪಕರಾಗಿ ಮೇಳವನ್ನು ಮುನ್ನಡೆಸುತ್ತಿದ್ದರು. ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರಾಗಿ ಮೂಡಿಬಂದಿರುವ ಇವರು, ಪೌರಾಣಿಕ ಮತ್ತು ಸಾಮಾಜಿಕ ಪ್ರಸಂಗಗಳಲ್ಲಿಯೂ ತಮ್ಮದೇಯಾದ ಛಾಪು ಮೂಡಿಸಿದ್ದರು.
ಇವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!