spot_img
Wednesday, January 22, 2025
spot_img

ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ: ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪುರ: ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಾಲಯದಲ್ಲಿ ಇದೇ ಫೆಬ್ರವರಿ 7 ರಿಂದ 17 ರವರೆಗೆ ನಡೆಸಲುದ್ದೇಶಿಸಿರುವ ನೂತನ ಧ್ವಜಸ್ಥಂಭ ಪ್ರತಿಷ್ಠಾಪನೆ, ಬ್ರಹ್ಮಕಲಶಾಭಿಷೇಕ ಮತ್ತು ಬ್ರಹ್ಮರಥೋತ್ಸವದ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ ಜ.24ರಂದು ನಡೆಯಿತು.

ಶ್ರೀ ಕೋಟಿಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ, ಸರಳ ಸಭಾ ಕಾರ್ಯಕ್ರಮದಲ್ಲಿ ಉದ್ಯಮಿ ಮಲ್ಯಾಡಿ ಶಿವರಾಮ ಶೆಟ್ಟಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಸ್ಥಾನದ ಧ್ವಜಮರ, ಮೂರ್ತಿಯಲ್ಲಿ ಭಗ್ನತೆ ಕಂಡು ಬಂದರೆ ಊರಿಗದು ಶ್ರೇಯಸ್ಕರವಲ್ಲ. ಆ ಹಿನ್ನೆಲೆಯಲ್ಲಿ ಕೋಟಿಲಿಂಗೇಶ್ವರ ದೇವಳಕ್ಕೆ ನೂತನ ಧ್ವಜಮರ ಪ್ರತಿಷ್ಠಾಪ ಸುಮಾರು ಆರು ದಶಕಗಳ ಬಳಿಕ ನಡೆಯುತ್ತಿರುವ ಈ ಮಹತ್ಕಾರ್ಯದಲ್ಲಿ ಪಾಲ್ಗೊಳ್ಳುವುದು ಪರಮ ಪುಣ್ಯದ ಕಾರ್ಯ. ನೂತನ ಧ್ವಜಮರ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವ, ಬ್ರಹ್ಮರಥೋತ್ಸವ ಮೊದಲಾದ ದೇವತಾ ಕಾರ್ಯಗಳು ಯಶಸ್ವಿಯಾಗಿ ನೆರವೇರಲಿ ಎಂದರು.

ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಗೋಪಾಡಿ ಶ್ರೀನಿವಾಸ ರಾವ್ ಮಾತನಾಡಿ, ಫೆಬ್ರವರಿ ೭ ರಿಂದ ೧೭ ರವರೆಗೆ ನಡೆಯುವ ಎಲ್ಲಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಪಾಲ್ಗೊಂಡು ಶ್ರೀ ಕೋಟಿಲಿಂಗೇಶ್ವರನ ಕೃಪೆಗೆ ಪಾತ್ರರಾಗಬೇಕು. ಈ ಮಹತ್ಕಾರ್ಯದ ಯಶಸ್ಸಿನಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಮ್. ಪ್ರಭಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದೇವಳದ ಪ್ರಧಾನ ತಂತ್ರಿಗಳಾದ ಪ್ರಸನ್ನ ಕುಮಾರ್ ಐತಾಳ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೋಣಿ ಕೃಷ್ಣದೇವ ಕಾರಂತ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಸುರೇಶ್ ಬೆಟ್ಟಿನ್, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ಮಾರ್ಕೋಡು ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಪ್ರಭಾಕರ ಕುಂಭಾಸಿ ಸ್ವಾಗತಿಸಿ, ದೇವಳದ ಕಾರ್ಯನಿರ್ವಹಣಾಧಿಕಾರಿ ಗಣೇಶ್ ಗೌಡ ವಂದಿಸಿದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!