spot_img
Saturday, March 28, 2026
spot_img

ಹೆಸಕುತ್ತೂರು : ಇಂಗ್ಲಿಷ್ ನಲಿಕಲಿ ತರಗತಿ ಉದ್ಘಾಟನೆ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿ ಗಣರಾಜ್ಯೋತ್ಸವ ದಿನದಂದು ಶಾಲಾ ಪೋಷಕರು ಮತ್ತು ದಾನಿಗಳ ನೆರವಿನಿಂದ ಸುಸಜ್ಜಿತವಾಗಿ ಅಣಿಗೊಳಿಸಿರುವ ಇಂಗ್ಲಿಷ್ ನಲಿಕಲಿ ತರಗತಿಯನ್ನು ಪ್ರಭಾತ ಭಂಡಾರಿ ಶಿರಿಯಾರ ಉದ್ಘಾಟಿಸಿದರು.

ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಅನಿವಾಸಿ ಭಾರತೀಯ ಶೇಖರ ಶೆಟ್ಟಿ ಕರಿನಕಟ್ಟೆಯವರು ನೆರವೇರಿಸಿದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೃಷ್ಣ ಕೆದ್ಲಾಯರವರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಕೊರ್ಗಿ ಗ್ರಾಮ ಪಂಚಾಯತ್ ಸದಸ್ಯರಾದ ಪಲ್ಲವಿ, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ವಿನುತಾ ಶೆಟ್ಟಿ, ಸದಸ್ಯರಾದ ಭಾಸ್ಕರ ಮೊಗವೀರ, ಆಶಾ ಕುಲಾಲ, ಶ್ರೀಕಾಂತ ಶೆಟ್ಟಿ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಸಂಜೀವ ಮೊಗವೀರ, ಸಹಶಿಕ್ಷಕರಾದ ಜಯರಾಮ ಶೆಟ್ಟಿ, ವಿಜಯಾ ಆರ್, ವಿಜಯ ಶೆಟ್ಟಿ, ರವೀಂದ್ರ ನಾಯಕ್, ಗೌರವ ಶಿಕ್ಷಕರಾದ ಮಧುರಾ, ಪ್ರೀತಿ ಹಾಗೂ ಅಂಗನವಾಡಿ ಶಿಕ್ಷಕಿ ಶರ್ಮಿಳಾ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಶೇಖರಕುಮಾರ್ ಸ್ವಾಗತಿಸಿದರು. ಸಹಶಿಕ್ಷಕಿ ಜಯಲಕ್ಷ್ಮಿ ಬಿ. ವಂದಿಸಿದರು. ಸಹಶಿಕ್ಷಕ ಅಶೋಕ ತೆಕ್ಕಟ್ಟೆ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!