spot_img
Saturday, March 28, 2026
spot_img

ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ಗ್ರಾಮೀಣ ಜನರಿಗೆ ಸರಕಾರದ 700ಕ್ಕೂ ಮಿಕ್ಕಿ ಸೇವೆಗಳು-ಗಣೇಶ್ . ಬಿ

ಸಾಮಾನ್ಯ ಸೇವಾ ಕೇಂದ್ರದ ಕಾರ್ಯಕರ್ತರಿಗೆ ತರಬೇತಿ ಕಾರ್ಯಾಗಾರ

ಗಂಗೊಳ್ಳಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲ್ಲೂಕು ಇದರ ವತಿಯಿಂದ ಬೈಂದೂರು ತಾಲ್ಲೂಕು ಸಾಮಾನ್ಯ ಸೇವಾ ಕೇಂದ್ರದ ಕಾರ್ಯಕರ್ತರಿಗೆ ತರಬೇತಿ ಕಾರ್ಯಾಗಾರ ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ಶನಿವಾರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಯೋಜನೆಯ ಉಡುಪಿ ಜಿಲ್ಲೆಯ ಹಿರಿಯ ನಿರ್ದೇಶಕ ಗಣೇಶ್ ಬಿ., ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶ್ರಮದ ಫಲವಾಗಿ ಇಂದು ಪ್ರತಿಯೊಂದು ಗ್ರಾಮೀಣ ಪ್ರದೇಶದಲ್ಲಿ ಗ್ರಾಹಕರ ಸಾಮಾನ್ಯ ಸೇವಾ ಕೇಂದ್ರವನ್ನು ತೆರೆದು ಆ ಮೂಲಕ ಸರಕಾರದ 700ಕ್ಕೂ ಮಿಕ್ಕಿ ಸೇವೆಗಳು ಗ್ರಾಮೀಣ ಮಟ್ಟದ ಜನರಿಗೆ ಸೇವೆಯನ್ನು ಒದಗಿಸುವುದು ಹೆಮ್ಮೆಯ ಸಂಗತಿಯಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಗ್ರಾಹಕರಿಗೆ ಡಿಜಿಟಲ್ ಸೇವೆ ಒದಗಿಸುವ ಸಲುವಾಗಿ ಬೈಂದೂರು ತಾಲೂಕಿನ ಸುಮಾರು 39 ಕಾರ್ಯಕರ್ತರಿಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿ ಶಶಿರೇಖಾ ಪಿ., ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಕೇಂದ್ರ ಸಮಿತಿಯ ಅಧ್ಯಕ್ಷ ರಘುರಾಮ ಕೆ ಪೂಜಾರಿ,, ತಾಲ್ಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ, ಉಡುಪಿ ತರಬೇತಿ ಸಂಸ್ಥೆಯ ಉಪನ್ಯಾಸಕ ರಮೇಶ್, ಐಟಿ ಪ್ರಬಂಧಕರು ಶ್ರವಣ್ ಪೂಜಾರಿ, ಗೋವರ್ಧನ್, ತಾಲ್ಲೂಕು ಹಣಕಾಸು ಪ್ರಬಂಧಕ ಸತೀಶ್ ಮೊದಲಾದವರು ಉಪಸ್ಥಿತರಿದ್ದರು.

ತ್ರಾಸಿ ವಲಯ ಮೇಲ್ವಿಚಾರಕ ಗಿರೀಶ್ ಸ್ವಾಗತಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಗೀತಾ ಕಾರ್ಯಕ್ರಮ ನಿರೂಪಿಸಿದರು. ತಾಲ್ಲೂಕು ನೋಡಲ್ ಅಧಿಕಾರಿ ಕುಮಾರ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!