spot_img
Saturday, March 28, 2026
spot_img

ನಾವುಂದ:ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರ

ಕುಂದಾಪುರ: ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಲಯನ್ಸ್ ಕ್ಲಬ್ ನಾವುಂದ ಸಂಯುಕ್ತ ಆಶ್ರಯದಲ್ಲಿ ಎನ್‌ಎಂಎಂಎಸ್ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭ ನಾವುಂದ ಸರಕಾರಿ ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ರವಿವಾರ ನಡೆಯಿತು.

ನಾವುಂದ ಲಯನ್ಸ್ ಕ್ಲಬ್ ಅಧ್ಯಕ್ಷ ನರಸಿಂಹ ದೇವಾಡಿಗ ಉದ್ಘಾಟಿಸಿ, ಈ ಕಾರ್ಯಗಾರದ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಾಗಿ ಕರೆ ನೀಡಿದರು.

ನಾವುಂದ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲೆ ಶಶಿಕಲಾ ನಾಯಕ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬೈಂದೂರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಸಂಪನ್ಮೂಲ ವ್ಯಕ್ತಿ, ಬಿಆರ್‌ಪಿ ಮಂಜುನಾಥ ನಾಯ್ಕ್, ಲಯನ್ಸ್ ಕ್ಲಬ್‌ನ ಕೋಶಾಧಿಕಾರಿ ಕೃಷ್ಣಾನಂದ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.

ಈ ಕಾರ್ಯಾಗಾರದಲ್ಲಿ ನಾವುಂದ ಸುತ್ತಮುತ್ತಲಿನ ಪರಿಸರದ ಶಾಲೆಗಳ ೮೭ ಮಂದಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಎನ್‌ಎಂಎಂಎಸ್ ಪರೀಕ್ಷಾ ಬೈಂದೂರು ತಾಲೂಕು ನೋಡಲ್ ಅಧಿಕಾರಿ, ಬಿಆರ್‌ಪಿ ಕರುಣಾಕರ ಶೆಟ್ಟಿ ಕಾರ್‍ಯಕ್ರಮ ಸಂಯೋಜಿಸಿದರು. ಲಯನ್ಸ್ ಕ್ಲಬ್‌ನ ರಾಜು ಬಿ.ಡಿ. ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!